ಗುತ್ತಿಗೆ ಆಧಾರದಲ್ಲಿ ವೈದ್ಯಾಧಿಕಾರಿ ಹುದ್ದೆಗೆ ಅರ್ಜಿ ಆಹ್ವಾನ

ಗುತ್ತಿಗೆ ಆಧಾರದಲ್ಲಿ ವೈದ್ಯಾಧಿಕಾರಿ ಹುದ್ದೆಗೆ ಅರ್ಜಿ ಆಹ್ವಾನ

ಹಾವೇರಿ, ಸೆ.18 : ರಾಷ್ಟ್ರೀಯ ಆರೋಗ್ಯ ಅಭಿಯಾನ ಯೋಜನೆಯಡಿ ಇ-ಆಸ್ಪತ್ರೆ ಕಾರ್ಯಕ್ರಮಕ್ಕೆ ಜಿಲ್ಲಾ ಆಸ್ಪತ್ರೆ ಹಬ್ ಸೆಂಟರ್ನಲ್ಲಿ ಕಾರ್ಯನಿರ್ವಹಿಸಲು ಒಂದು ವರ್ಷದ ಅವಧಿಗೆ ಗುತ್ತಿಗೆ ಆಧಾರದ ಮೇಲೆ ಕಾರ್ಯನಿರ್ವಹಿಸಲು ವೈದ್ಯಾಧಿಕಾರಿಗಳ ಹುದ್ದೆಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅಭ್ಯರ್ಥಿಯು ಎಂ.ಬಿ.ಬಿ.ಎಸ್. ವಿದ್ಯಾರ್ಹತೆ ಹೊಂದಿರಬೇಕು. ಆಯ್ಕೆಯಾದ ವೈದ್ಯಾಧಿಕಾರಿಗೆ ಮಾಸಿಕ ರೂ.45,000/- ಸಂಚಿತ ವೇತನ ಪಾವತಿಸಲಾಗುವುದು. ಆಸಕ್ತ ಅಭ್ಯರ್ಥಿಗಳು ತಮ್ಮ ಬಯೋಡಾಟಾವನ್ನು ದಿನಾಂಕ 24-09-2020 ರ ಬೆಳಿಗ್ಗೆ 10 ರಿಂದ ಮಧ್ಯಾಹ್ನ 1 ಗಂಟೆಯೊಳಗೆ ಜಿಲ್ಲಾ ಕುಷ್ಠರೋಗ ನಿರ್ಮೂಲನಾಧಿಕಾರಿಗಳ ಕಚೇರಿ, ಬಿ ಬ್ಲಾಕ್ ಜಿಲ್ಲಾಡಳಿತ ಭವನ, ದೇವಗಿರಿ-ಹಾವೇರಿ ಇವರಿಗೆ ಸಲ್ಲಿಸಲು ಜಿಲ್ಲಾ ಕುಷ್ಠರೋಗ ನಿರ್ಮೂಲನಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.