ಪತ್ರಿಕೋದ್ಯಮ ಉಪನ್ಯಾಸಕ ಬಸಯ್ಯ ಹೊಸೂರಮಠ ವಿಧಿವಶ

ಪತ್ರಿಕೋದ್ಯಮ ಉಪನ್ಯಾಸಕ ಬಸಯ್ಯ ಹೊಸೂರಮಠ ವಿಧಿವಶ

ದಾವಣಗೆರೆ : ದಾವಣಗೆರೆ ವಿಶ್ವವಿದ್ಯಾನಿಲಯದ ಪತ್ರಿಕೋದ್ಯಮ ವಿಭಾಗದಲ್ಲಿ ಅತಿಥಿ ಪ್ರಾಧ್ಯಾಪಕರಾಗಿ ಕಾರ್ಯ ನಿರ್ವಹಿಸಿದ್ದ ಡಾ.ಬಸಯ್ಯ ಹೊಸೂರಮಠ ಅವರು ಬುಧವಾರ ಹೃದಯಾಘಾತದಿಂದ ನಿಧನರಾಗಿದ್ದಾರೆ. ಅವರಿಗೆ ಪತ್ನಿ, ಮೂರು ತಿಂಗಳ ಗಂಡು ಮಗು ಇದೆ. ಬೆಳಗಾವಿ ಜಿಲ್ಲೆ ರಾಮದುರ್ಗದಲ್ಲಿ ಅವರ ಅಂತ್ಯಕ್ರಿಯೆ ನಡೆಯಲಿದೆ. ಧಾರವಾಡ ಕರ್ನಾಟಕ ವಿಶ್ವವಿದ್ಯಾಲಯ ಪತ್ರಿಕೋದ್ಯಮ ವಿಭಾಗದ ವಿಡಿಯೊ ಎಡಿಟಿಂಗ್ ವಿಷಯದಲ್ಲಿ ಅವರು ವಿಶೇಷ ಪರಿಣಿತಿ ಪಡೆದಿದ್ದರು. ವಿದ್ಯಾರ್ಥಿಗಳ ನೆಚ್ಚಿನ ಶಿಕ್ಷಕರಾಗಿ ಪ್ರಾಮಾಣಿಕ ಕಾರ್ಯ ನಿರ್ವಹಿಸಿದ್ದರು. ಬಸಯ್ಯ ಹೊಸೂರಮಠ ಅವರ ನಿಧನಕ್ಕೆ ದಾವಣಗೆರೆ ವಿಶ್ವವಿದ್ಯಾನಿಲಯ ಕುಲಪತಿ ಪ್ರೊ.ಶರಣಪ್ಪ ವಿ.ಹಲಸೆ, ಕುಲಸಚಿವ ಪ್ರೊ. ಬಸವರಾಜ ಬಣಕಾರ, ಪರೀಕ್ಷಾಂಗ ಕುಲಸಚಿವೆ ಪ್ರೊ.ಎಚ್.ಎಸ್. ಅನಿತಾ, ಹಣಕಾಸು ಅಧಿಕಾರಿ ಪ್ರೊ.ಗೋಪಾಲ ಎಂ. ಅಡವಿರಾವ್, ಡೀನ್ ಪ್ರೊ.ಕೆ.ಬಿ.ರಂಗಪ್ಪ, ಪತ್ರಿಕೋದ್ಯಮ ವಿಭಾಗ ಮುಖ್ಯಸ್ಥ ಶಿವಕುಮಾರ ಕಣಸೋಗಿ ಸಂತಾಪ ಸೂಚಿಸಿದ್ದಾರೆ.