ಭಯೋತ್ಪಾದನೆ ವಿರೋಧಿ ದಿನಾಚರಣೆ : ಪ್ರತಿಜ್ಞೆ ಸ್ವೀಕಾರ

ಭಯೋತ್ಪಾದನೆ ವಿರೋಧಿ ದಿನಾಚರಣೆ : ಪ್ರತಿಜ್ಞೆ ಸ್ವೀಕಾರ

ಹಾಸನ‌, ಮೇ.21 : ಭಯೋತ್ಪಾದನೆ ವಿರೋಧಿ ದಿನದ ಅಂಗವಾಗಿ ಜಿಲ್ಲಾಧಿಕಾರಿ ಕಚೇರಿಯಲ್ಲಿಂದು ಭಯೋತ್ಪಾದನೆ ವಿರೋಧಿ ಪ್ರತಿಜ್ಞೆ ಸ್ವೀಕರಿಸಲಾಯಿತು . ಜಿಲ್ಲಾಧಿಕಾರಿ ಆರ್.ಗಿರೀಶ್ ಅವರ ಉಪಸ್ಥಿತಿಯಲ್ಲಿ ಅಪರ ಜಿಲ್ಲಾ ಕವಿತಾ ರಾಜಾರಾಂ ಅವರು ಪ್ರತಿಜ್ಞಾ ವಿಧಿ ಬೊಧಿಸಿದರು. ರಾಷ್ಟ್ರದಲ್ಲಿ ಎಲ್ಲಾ ಬಗೆಯ ಭಯೋತ್ಪಾದನೆ ಮತ್ತು ಹಿಂಸೆಯನ್ನು ನಮ್ಮೆಲ್ಲರ ಶಕ್ತಿ ಸಾಮರ್ಥ್ಯದಿಂದ ಎದುರಿಸುತ್ತೇವೆ, ಹಾಗೂ ನಮ್ಮ ಸಹ ಬಾಂಧವರಲ್ಲಿ ಶಾಂತಿ, ಸಾಮಾಜಿಕ ಸೌಹಾರ್ದತೆ ಮತ್ತು ಪರಸ್ಪರ ಅರಿವನ್ನು ಸಾಧಿಸಲು ಹಾಗೂ ಉತ್ತೇಜಿಸಲು ಮತ್ತು ಮಾನವ ಜೀವಕ್ಕೆ ಹಾಗೂ ಮೌಲ್ಯಗಳಿಗೆ ಬೆದರಿಕೆ ಒಡ್ಡುತ್ತಿರುವ ವಿಚ್ಛಿದ್ರಕಾರಿ ಶಕ್ತಿಗಳ ವಿರುದ್ಧ ಹೋರಾಡಲು ನಾವು ಪಣ ತೊಡುತ್ತೇವೆ ಎಂದು ಪ್ರತಿಜ್ಞೆ ಸ್ವೀಕರಿಸಲಾಯಿತು. ಜಿಲ್ಲಾ ವಾರ್ತಾಧಿಕಾರಿ‌ ವಿನೋದ್ ಚಂದ್ರ ಹಾಗೂ ಕಂದಾಯ ಇಲಾಖೆ ಅಧಿಕಾರಿ ಸಿಬ್ಬಂದಿ ಹಾಜರಿದ್ದರು.