ಕೊರೊನಾ ಸೋಂಕಿತ ವ್ಯಕ್ತಿಯ ಸಾವಿಗೆ ಬೆಲೆ ಇಲ್ವ.? - ಅಮಾನವೀಯವಾಗಿ ಅಂತ್ಯ ಸಂಸ್ಕಾರ, ತನಿಖೆಗೆ ಆದೇಶಿಸಿದ ಡಿಸಿ

ಕೊರೊನಾ ಸೋಂಕಿತ ವ್ಯಕ್ತಿಯ ಸಾವಿಗೆ ಬೆಲೆ ಇಲ್ವ.? - ಅಮಾನವೀಯವಾಗಿ ಅಂತ್ಯ ಸಂಸ್ಕಾರ, ತನಿಖೆಗೆ ಆದೇಶಿಸಿದ ಡಿಸಿ

ಬಳ್ಳಾರಿ, ಜೂ.30 : ಸೋಮವಾರ ಬಳ್ಳಾರಿ ಜಿಲ್ಲೆಯಲ್ಲಿ ಕೋವಿಡ್ ನಿಂದ ಮೃತಪಟ್ಟವರನ್ನು ಅಮಾನವೀಯ ರೀತಿಯಲ್ಲಿ ಅಂತ್ಯ ಸಂಸ್ಕಾರ ಮಾಡಲಾಗಿದ್ದು, ಇದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದ್ದು, ಜಿಲ್ಲಾಡಳಿತದ ವಿರುದ್ಧ ಸಾಮಾಜಿಕ ಮಾಧ್ಯಮಗಳಲ್ಲಿ ವ್ಯಾಪಕ ಟೀಕೆ ವ್ಯಕ್ತವಾಗುತ್ತಿದೆ. ಕೋವಿಡ್-19ನಿಂದ ಸಾವನ್ನಪ್ಪಿದವರನ್ನು ಕೇಂದ್ರ ಸರ್ಕಾರದ ಆರೋಗ್ಯ ಇಲಾಖೆಯ ಮಾರ್ಗಸೂಚಿಯನ್ವಯ ಅಂತ್ಯಸಂಸ್ಕಾರವನ್ನು ನಡೆಸಬೇಕು ಎಂಬ ಕಾನೂನು ಇದೆ. ಆದರೆ, ಬಳ್ಳಾರಿ ಜಿಲ್ಲೆಯಲ್ಲಿ ಸೋಂಕಿನಿಂದ ಮೃತಪಟ್ಟ ಇಬ್ಬರು ವ್ಯಕ್ತಿಗಳ ಅಂತ್ಯಕ್ರಿಯೆಯನ್ನು ಅತ್ಯಂತ ಕ್ರೂರವಾಗಿ ಮಾಡಲಾಗಿದೆ. ಸಿಬ್ಬಂದಿಗಳು ಎರಡು ಮೃತ ದೇಹಗಳನ್ನು ದರದರನೆ ಎಳೆದುಕೊಂಡು ಹೋಗಿ ಒಂದೇ ಗುಂಡಿಯಲ್ಲಿ ಹಾಕಿ ಮುಚ್ಚಿದ್ದಾರೆ ಎನ್ನಲಾಗುತ್ತಿದೆ. ಇದು ಸಾರ್ವಜನಿಕ ಆಕ್ರೋಶಕ್ಕೆ ಕಾರಣವಾಗಿದ್ದು, ಮಾಧ್ಯಮಗಳ ವರದಿ ಹಿನ್ನಲೆ ಜಿಲ್ಲಾಧಿಕಾರಿ ಎಸ್.ಎಸ್.ನಕುಲ್ ಅಪರ ಜಿಲ್ಲಾಧಿಕಾರಿ ಪಿ.ಎಸ್.ಮಂಜುನಾಥ ನೇತೃತ್ವದಲ್ಲಿ ತನಿಖೆ ನಡೆಸಲು ಆದೇಶ ಹೊರಡಿಸಿದ್ದಾರೆ.