ಕೊರೊನಾ ನಿಯಂತ್ರಣಕ್ಕೆ ಪ್ಲಾಸ್ಮಾ ಬ್ಯಾಂಕ್ ಸ್ಥಾಪನೆಗೆ ಮುಂದಾದ ದೆಹಲಿ ಸರ್ಕಾರ..!

ಕೊರೊನಾ ನಿಯಂತ್ರಣಕ್ಕೆ ಪ್ಲಾಸ್ಮಾ ಬ್ಯಾಂಕ್ ಸ್ಥಾಪನೆಗೆ ಮುಂದಾದ ದೆಹಲಿ ಸರ್ಕಾರ..!

ನವದೆಹಲಿ, ಜೂ.29 : ದಿನೇ-ದಿನೇ ಗಣನೀಯ ಪ್ರಮಾಣದಲ್ಲಿ ಏರಿಕೆಯಾಗುತ್ತಿರುವ ಕೊರೊನಾ ಸೋಂಕಿನ ಪ್ರಮಾಣವನ್ನು ನಿಯಂತ್ರಿಸಲು ದೆಹಲಿ ಸರ್ಕಾರ ಮುಂದಾಗಿದ್ದು, ಇದೀಗ ದೇಶದಲ್ಲೇ ಮೊದಲ ಪ್ಲಾಸ್ಮಾ ಬ್ಯಾಂಕ್ ಸ್ಥಾಪಿಸುವುದಾಗಿ ಸಿಎಂ ಅರವಿಂದ್ ಕೇಜ್ರಿವಾಲ್ ಘೋಷಿಸಿದ್ದಾರೆ. ಎರಡು ದಿನಗಳಲ್ಲಿ ದಕ್ಷಿಣ ದೆಹಲಿಯ ವಸಂತ್ ಕುಂಜ್ ನ ಇನ್ಸ್ಟಿಟ್ಯೂಟ್ ಆಫ್ ಲಿವರ್ ಅಂಡ್ ಬಿಲಿಯರಿ ಸೈನ್ಸಸ್ ನಲ್ಲಿ ದೇಶದ ಮೊದಲ ಪ್ಲಾಸ್ಮಾ ಬ್ಯಾಂಕ್ ಸ್ಥಾಪಿಸಲಾಗುತ್ತಿದ್ದು, ಕೋವಿಡ್ ನಿಂದ ಗುಣಮುಖರಾಗುತ್ತಿರುವ ಜನರು ಪ್ಲಾಸ್ಮಾ ದಾನ ಮಾಡುವಂತೆ ಮನವಿ ಮಾಡಿದ್ದಾರೆ. ಈಗಾಗಲೇ ದೆಹಲಿಯಲ್ಲಿ ಆರೋಗ್ಯ ಸಚಿವ ಸತ್ಯಂದ್ರ ಜೈನ್ ಸೇರಿ ಇದುವರೆಗೂ 29 ರೋಗಿಗಳ ಮೇಲೆ ಪ್ಲಾಸ್ಮಾ ಥೆರಪಿಯನ್ನು ಪ್ರಯೋಗ ಮಾಡಿದ್ದು, ಎಲ್ಲಾ ಪ್ರಕರಣಗಳ ಫಲಿತಾಂಶ ಉತ್ತಮವಾಗಿದೆ. ಈ ಹಿನ್ನಲೆಯಲ್ಲಿ ದೆಹಲಿಯಲ್ಲಿ ಪ್ಲಾಸ್ಮಾ ಥೆರಪಿಗೆ ಹೆಚ್ಚು ಮನ್ನಣೆ ನೀಡಲಾಗುತ್ತಿದೆ ಮತ್ತು ಜೀವ ಉಳಿಸುವ ಕೆಲಸ ಮಾಡುತ್ತಿದ್ದೇವೆ ಎಂದು ಕೇಜ್ರಿವಾಲ್ ತಿಳಿಸಿದ್ದಾರೆ.