ಕೇಂದ್ರ ಗೃಹಸಚಿವ ಅಮಿತ್ ಶಾಗೆ ಕೋವಿಡ್ ದೃಢ

ಕೇಂದ್ರ ಗೃಹಸಚಿವ ಅಮಿತ್ ಶಾಗೆ ಕೋವಿಡ್ ದೃಢ

ನವದೆಹಲಿ, ಅ.02 : ಕೇಂದ್ರದ ಗೃಹ ಸಚಿವ ಅಮಿತ್ ಶಾಗೆ ಭಾನುವಾರ ಕೋವಿಡ್ ಸೋಂಕು ತಗುಲಿರುವುದು ದೃಢಪಟ್ಟಿದ್ದು, ಈ ಕುರಿತು ಸ್ವತಃ ಅಮಿತ್ ಶಾ ಟ್ವಿಟರ್ ಮೂಲಕ ತಮಗೆ ಸೋಂಕು ತಗುಲಿರುವ ಬಗ್ಗೆ ಬರೆದುಕೊಂಡಿದ್ದಾರೆ. ನನಗೂ ಕೊರೊನಾ ಪಾಸಿಟಿವ್ ಎಂಬುದಾಗಿ ವರದಿಯಿಂದ ದೃಢಪಟ್ಟಿದೆ. ನನ್ನ ಆರೋಗ್ಯ ಚೆನ್ನಾಗಿದೆ. ವೈದ್ಯರ ಸಲಹೆ ಮೇರೆಗೆ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದೇನೆ. ನನ್ನ ಸಂಪರ್ಕದಲ್ಲಿದ್ದವರು ಕೊರೋನಾ ಪರೀಕ್ಷೆಗೆ ಒಳಪಡುವಂತೆ ಮನವಿ ಮಾಡಿದ್ದಾರೆ.