ಕೊಪ್ಪಳ ಜಿಲ್ಲಾಧಿಕಾರಿ ಪಿ.ಸುನೀಲ್ ಕುಮಾರ್ ವರ್ಗಾವಣೆ

ಕೊಪ್ಪಳ ಜಿಲ್ಲಾಧಿಕಾರಿ ಪಿ.ಸುನೀಲ್ ಕುಮಾರ್ ವರ್ಗಾವಣೆ

ಕೊಪ್ಪಳ, ಜೂ.29 : ಕೊಪ್ಪಳದ ದಕ್ಷ ಜಿಲ್ಲಾಧಿಕಾರಿ ಆಗಿದ್ದ ಪಿ.ಸುನೀಲ್ ಕುಮಾರ್ ವರ್ಗಾವಣೆ ಆಗಿದ್ದು, ಅವರ ಸ್ಥಾನಕ್ಕೆ ಇದೀಗ ಸುರಲ್ಕರ್ ವಿಕಾಸ್ ಕಿಶೋರ್ ಅವರನ್ನು ನೂತನ ಜಿಲ್ಲಾಧಿಕಾರಿಯನ್ನಾಗಿ ನೇಮಿಸಿ, ತಕ್ಷಣಕ್ಕೆ ಜಾರಿಗೆ ಬರುವಂತೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಕಳೆದೆರೆಡು ವರ್ಷಗಳಿಂದ ಜಿಲ್ಲೆಯಲ್ಲಿ ಉತ್ತಮ ಕಾರ್ಯನಿರ್ವಹಿಸುವ ಮೂಲಕ ಜಿಲ್ಲೆಯ ಜನರ ಮನಸ್ಸನ್ನು ಗೆದ್ದಿದ್ದ ಜಿಲ್ಲಾಧಿಕಾರಿ ಸುನೀಲ್ ಕುಮಾರ್ ವರ್ಗಾವಣೆ ಜಿಲ್ಲೆಯ ಜನರಿಗೆ ಆಘಾತ ಉಂಟು ಮಾಡಿದೆ. ಇನ್ನು, ಜಿಲ್ಲಾಧಿಕಾರಿ ಸುನೀಲ್ ಕುಮಾರ್ ಅವರನ್ನು ಬೆಂಗಳೂರಿನ ಬಿಬಿಎಂಪಿಯ ಹಣಕಾಸು ಮತ್ತು ಐಟಿ ಕಮೀಷನರ್ ನ್ನಾಗಿ ಸರ್ಕಾರ ವರ್ಗಾವಣೆ ಮಾಡಿದೆ.