ಸೆಹ್ವಾಗ್ ಮನೆ ಮೇಲೆ ಮಿಡತೆ ದಾಳಿ..!

ಸೆಹ್ವಾಗ್ ಮನೆ ಮೇಲೆ ಮಿಡತೆ ದಾಳಿ..!

ನವದೆಹಲಿ, ಜೂ.27 : ಉತ್ತರ ಭಾರತದ ಹಲವು ರಾಜ್ಯಗಳಲ್ಲಿ ಸಾವಿರಾರು ಎಕರೆ ಪ್ರದೇಶದಲ್ಲಿ ರೈತರು ಬೆಳೆದಿದ್ದ ಜಮೀನುಗಳಿಗೆ ನುಗ್ಗಿ ಬೆಳೆ ಹಾನಿ ಮಾಡಿದ್ದ ಮಿಡತೆಗಳು ಇದೀಗ ರಾಷ್ಟ್ರ ರಾಜಧಾನಿ ನವದೆಹಲಿಯತ್ತ ಮುಖಮಾಡಿವೆ. ಟೀಮ್ ಇಂಡಿಯಾದ ಮಾಜಿ ಕ್ರಿಕೆಟಿಗ ವಿರೇಂದ್ರ ಸೆಹ್ವಾಗ್ ತಮ್ಮ ಮನೆ ಮೇಲೆ ಶನಿವಾರ ಮಿಡತೆಗಳು ದಾಳಿ ಮಾಡಿದ ವಿಡಿಯೋವನ್ನು ತಮ್ಮ ಟ್ವಿಟರ್ ಖಾತೆಯಲ್ಲಿ ಶೇರ್ ಮಾಡಿದ್ದಾರೆ.

ಕಳೆದ ಒಂದೂವರೆ ತಿಂಗಳಿಂದಲೂ ಉತ್ತರ ಭಾರತದಲ್ಲಿ ಮಿಡತೆಗಳ ಹಾವಳಿ ಹೆಚ್ಚಾಗಿದ್ದು, ಮಧ್ಯಪ್ರದೇಶ, ರಾಜಸ್ಥಾನ, ಗುಜರಾತ್ ಸೇರಿದಂತೆ ಹಲವು ರಾಜ್ಯದಲ್ಲಿ ಸಾವಿರಾರು ಎಕರೆ ಪ್ರದೇಶದಲ್ಲಿ ರೈತರು ಬೆಳೆದಿದ್ದ ಬೆಳೆಯನ್ನು ತಿಂದು ನಾಶ ಮಾಡಿವೆ.