ನಟ ಚಿರಂಜೀವಿ ಸರ್ಜಾ ಹೃದಯಾಘಾತದಿಂದ ಸಾವು

ನಟ ಚಿರಂಜೀವಿ ಸರ್ಜಾ ಹೃದಯಾಘಾತದಿಂದ ಸಾವು

ಬೆಂಗಳೂರು, ಜೂ.07 : ಸ್ಯಾಂಡಲ್ವುಡ್ ನ ಖ್ಯಾತ ನಟ ಚಿರಂಜೀವಿ ಸರ್ಜಾ ಇಂದು ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಚಿರಂಜೀವಿ ಸರ್ಜಾಗೆ ತೀವ್ರ ಉಸಿರಾಟದ ಸಮಸ್ಯೆ ಎದುರಾಗಿತ್ತು. ಹೀಗಾಗಿ ಅವರನ್ನು ಇಂದು ಜಯನಗರದ ಅಪೋಲೋ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೇ ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ. ಇನ್ನು, ಚಿರಂಜೀವಿ ಸರ್ಜಾ ಕನ್ನಡದಲ್ಲಿ ಸಾಕಷ್ಟು ಸಿನಿಮಾಗಳನ್ನು ಮಾಡಿ ಜನಪ್ರಿಯತೆಯನ್ನು ಗಳಿಸಿದ್ದರು.