
ಬೆಂಗಳೂರು: ರಾಜ್ಯ ಬಿಜೆಪಿ ಘಟಕ ಅಧ್ಯಕ್ಷರಾಗಿ ನೇಮಕಗೊಂಡಿರುವ ಬಿ.ವೈ.ವಿಜಯೇಂದ್ರ ಅವರ ಪದಗ್ರಹಣ ಕಾರ್ಯಕ್ರಮ ನ.15 ಅಥವಾ 16ರಂದು ಆಯೋಜಿಸಲು ಚರ್ಚೆ ನಡೆದಿದೆ.
ನ.17ರಂದು ಶಾಸಕಾಂಗ ಸಭೆ ನಡೆಸಿ ಬಿ.ವೈ ವಿಜಯೇಂದ್ರ ಅವರು ದೆಹಲಿಗೆ ತೆರಳಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಬಿಜೆಪಿಯಲ್ಲಿ ರಾಜಕೀಯ ಚಟುವಟಿಕೆಗಳು ಗರಿ ಗರಿಗೆದರಿದ್ದು, ನೂತನ ರಾಜ್ಯಾಧ್ಯಕ್ಷರ ಪದಗ್ರಹಣ ಕಾರ್ಯಕ್ರಮಕ್ಕೂ ಸಿದ್ಧತೆ ನಡೆಸಲಾಗುತ್ತಿದೆ. ಕಾರ್ಯಕ್ರಮದಲ್ಲಿ ಬಿಜೆಪಿಯ ನಾಯಕರು, ಕಾರ್ಯಕರ್ತರ ಸಮ್ಮುಖದಲ್ಲಿ ವಿಜಯೇಂದ್ರ ಪದಗ್ರಹಣ ಮಾಡಲಿದ್ದಾರೆ ಎಂದು ತಿಳಿದುಬಂದಿದೆ.