
ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರಿಗೆ ಮಣಿ ಹಾಕಿರುವ ಬಿಜೆಪಿ ಹೈಕಮಾಂಡ್, ಇದೀಗ ಮತ್ತೊಂದು ಮಹತ್ವದ ಜವಾಬ್ದಾರಿ ವಹಿಸಿದೆ.
ತೆಲಂಗಾಣ ಚುನಾವಣೆಯ ಪ್ರಚಾರದ ಸ್ಟಾರ್ ಕ್ಯಾಂಪೇನರ್ ಪಟ್ಟಿಯಲ್ಲಿ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರಿಗೆ ಸ್ಥಾನ ನೀಡಲಾಗಿದೆ.
ತೆಲಂಗಾಣದಲ್ಲಿ ಕನ್ನಡ ಭಾಷಿಕರು ಹೆಚ್ಚಾಗಿದ್ದು, ಯಡಿಯೂರಪ್ಪ ಅವರನ್ನು ಪ್ರಚಾರಕನ್ನಾಗಿಸಿದರೆ ಮತಗಳನ್ನು ಕ್ರೋಢೀಕರಿಸಬಹುದು ಎಂಬ ಲೆಕ್ಕಾಚಾರ ಹಾಕಲಾಗಿದೆ.
ಪ್ರಧಾನಿ ನರೇಂದ್ರ ಮೋದಿ, ಸಚಿವರಾದ ಅಮಿತ್ ಷಾ, ರಾಜನಾಥ ಸಿಂಗ್, ಸ್ಮೃತಿ ಇರಾಣಿ, ಯಡಿಯೂರಪ್ಪ ಸೇರಿ 40 ಸ್ಟಾರ್ ಪ್ರಚಾರಕರ ಪಟ್ಟಿಯನ್ನು ಬಿಜೆಪಿ ಬಿಡುಗಡೆ ಮಾಡಿದೆ.
ತೆಲಂಗಾಣದ ಒಟ್ಟು 119 ಸ್ಥಾನಗಳಿಗೆ ನವೆಂಬರ್ 30 ರಂದು ಒಂದೇ ಹಂತದಲ್ಲಿ ಮತದಾನ ನಡೆಯಲಿದೆ. ಡಿಸೆಂಬರ್ 3 ರಂದು ಫಲಿತಾಂಶ ಹೊರಬೀಳಲಿದೆ.