ಬೆಂಗಳೂರು: ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ಬಿಜೆಪಿ ಕಚೇರಿ ಜಗನ್ನಾಥ ಭವನದಲ್ಲಿ ಕರ್ನಾಟಕ ಬಿಜೆಪಿ ಘಟಕದ ನೂತನ ರಾಜ್ಯಾಧ್ಯಕ್ಷರಾಗಿ ಬಿ.ವೈ.ವಿಜಯೇಂದ್ರ ಬುಧವಾರ ಅಧಿಕಾರ ವಹಿಸಿಕೊಂಡರು.

ಪಕ್ಷಕ್ಕೆ ಹೊಸ ಸಾರಥಿಯಾಗಿ ವಿಜಯೇಂದ್ರ ಅವರು ನಿರ್ಗಮಿತ ಅಧ್ಯಕ್ಷ ನಳಿನ್ ಕುಮಾರ್ ಕಟೀಲು ಅವರಿಂದ ಅಧಿಕಾರ ವಹಿಸಿಕೊಂಡಿದ್ದಾರೆ.
ಈ ಸಂದರ್ಭದಲ್ಲಿ ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್.ಯಡಿಯೂರಪ್ಪ, ಬಸವರಾಜ ಬೊಮ್ಮಾಯಿ, ಮಾಜಿ ಸಚಿವರಾದ ಆರಗ ಜ್ಞಾನೇಂದ್ರ, ಮುನಿರತ್ನ, ಪ್ರಭು ಚೌಹಾಣ್, ಸಂಸದರಾದ ರಾಘವೇಂದ್ರ, ತೇಜಸ್ವಿ ಸೂರ್ಯ ಮತ್ತಿತರರು ಇದ್ದರು.
ಆದರೆ, ರಾಜ್ಯಾಧ್ಯಕ್ಷ ಹುದ್ದೆ ಮೇಲೆ ಕಣ್ಣಿಟ್ಟಿದ್ದ ವಿ ಸೋಮಣ್ಣ, ಬಸನಗೌಡ ಪಾಟೀಲ ಯತ್ನಾಳ, ಸಿ ಟಿ ರವಿ ಗೈರಾಗಿರುವುದು ಹಲವು ಅನುಮಾನ ಶುರುವಾಗಿದೆ. ಬಿಜೆಪಿ ಕಾರ್ಯಕರ್ತರಲ್ಲಿ ಹುರುಪು ಹುಮ್ಮಸ್ಸು ಮನೆ ಮಾಡಿದೆ.