Wednesday, November 29, 2023
HomePOLITICSಲೋಕಸಭೆ ಅಖಾಡ: ಹಾವೇರಿಯಿಂದ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ…? ರಾಜ್ಯಾಧ್ಯಕ್ಷ ಹುದ್ದೆ ಸಿಗಲಿಲ್ಲ… ಪ್ರತಿಪಕ್ಷದ ನಾಯಕ...

ಲೋಕಸಭೆ ಅಖಾಡ: ಹಾವೇರಿಯಿಂದ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ…? ರಾಜ್ಯಾಧ್ಯಕ್ಷ ಹುದ್ದೆ ಸಿಗಲಿಲ್ಲ… ಪ್ರತಿಪಕ್ಷದ ನಾಯಕ ಸ್ಥಾನವೂ ದಕ್ಕಲಿಲ್ಲ…

ಗದಗ: ಹಾವೇರಿ ಲೋಕಸಭೆ ಕ್ಣೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅವರು ಕಣಕ್ಕಿಳಿಯಲಿದ್ದಾರೆ ಎಂಬ ಮಾತುಗಳಿಗೆ ರೆಕ್ಕಪುಕ್ಕ ಸಿಕ್ಕಿವೆ.
ಬಸವರಾಜ ಬೊಮ್ಮಾಯಿ ಅವರು ಪ್ರತಿಪಕ್ಷದ ನಾಯಕರಾಗುತ್ತಾರೆ ಇಲ್ಲವೇ ಪಕ್ಷದ ರಾಜ್ಯಾಧ್ಯಕ್ಷರಾಗುವ ಸಾಧ್ಯತೆಗಳಿವೆ. ಆದ್ದರಿಂದ ಹಾವೇರಿ ಲೋಕಸಭೆ ಕ್ಷೇತ್ರದಿಂದ ಸ್ಪರ್ಧಿಸುವ ಸಾಧ್ಯತೆ ಕಡಿಮೆ‌ ಎಂದು ಇಲ್ಲಿವರೆಗೆ ಊಹಿಸಲಾಗಿತ್ತು. ಆದರೆ, ಈ ಎರಡೂ ಸ್ಥಾನಗಳು ಸದ್ಯ ಭರ್ತಿ ಅಗಿವೆ. ಬಿ ವೈ ವಿಜಯೇಂದ್ರ ರಾಜ್ಯಾಧ್ಯಕ್ಷ ಹಾಗೂ ಆರ್ ಅಶೋಕ ಪ್ರತಿ ಪಕ್ಷದ ನಾಯಕರಾಗಿ ನೇಮಕಗೊಂಡಿದ್ದಾರೆ. ಹೀಗಾಗಿ ಬಸವರಾಜ ಬೊಮ್ಮಾಯಿ ಅವರು ಹಾವೇರಿ ಲೋಕಸಭೆ ಕ್ಷೇತ್ರದಿಂದ ಸ್ಪರ್ಧಿಸಬಹುದು ಎಂಬ ಲೆಕ್ಕಾಚಾರ ಶುರುವಾಗಿದೆ.

ಹಾಲಿ ಸಂಸದ ಶಿವಕುಮಾರ ಉದಾಸಿ ಅವರು ಚುನಾವಣೆ ರಾಜಕಾರಣದ ಬಗ್ಗೆ ಉದಾಸೀನ ತೋರಿದ್ದರಿಂದ ಹೊಸಬರಿಗಾಗಿ ಬಿಜೆಪಿ ವರಿಷ್ಠರು ಹುಡುಕಾಟ‌‌ ‌ನಡೆಸಿದ್ದಾರೆ.
ಮಾಜಿ ಉಪಮುಖ್ಯಮಂತ್ರಿ ಕೆ ಎಸ್ ಈಶ್ವರಪ್ಪ ಸಹ ತಮ್ಮ ಪುತ್ರ ಕಾಂತೇಶ ಅವರಿಗೆ ಹಾವೇರಿ ಟಿಕೆಟ್ ನೀಡಬೇಕು ಎಂದು ಪಕ್ಷದ ವರಿಷ್ಠರ ಮೇಲೆ‌ ಒತ್ತಡ ಹೇರುತ್ತಿದ್ದಾರೆ.
ಲೋಕಸಭೆ ಚುನಾವಣೆಗಾಗಿ ಕಾಂಗ್ರೆಸ್ ಮತ್ತು ಬಿಜೆಪಿ ಪಕ್ಷದೊಳಗೆ ಹತ್ತಾರು ಲೆಕ್ಕಾಚಾರಗಳು ಶುರುವಾಗಿವೆ. ಗೆಲುವು ಸಾಧಿಸುವ ಅಭ್ಯರ್ಥಿಗಾಗಿ ಎರಡೂ ಪಕ್ಷಗಳು ಹುಡುಕಾಟ ನಡೆಸಿವೆ. ಗದಗ ನಗರದ ಡಾ ಶೇಖರ ಸಜ್ಜನರ ಕೂಡಾ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

error: Content is protected !!