Wednesday, November 29, 2023
HomeSportಲೋಕಸಭೆ ಹಣಾಹಣಿ: ಗಾಲಿ ಜನಾರ್ದನರಡ್ಡಿ ಬಿಜೆಪಿಗೆ ಶಿಫ್ಟ್…? ಪಕ್ಷ ಗಟ್ಟಿಗೊಳಿಸಲು ಮುಂದಾದ್ರಾ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ…...

ಲೋಕಸಭೆ ಹಣಾಹಣಿ: ಗಾಲಿ ಜನಾರ್ದನರಡ್ಡಿ ಬಿಜೆಪಿಗೆ ಶಿಫ್ಟ್…? ಪಕ್ಷ ಗಟ್ಟಿಗೊಳಿಸಲು ಮುಂದಾದ್ರಾ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ… ಲೋಕ‌ಸಮರದಲ್ಲಿ ಕೈ ಗೆ ಏಟು ಕೊಡಲು ಕಸರತ್ತು…ರಡ್ಡಿ ಸೇರ್ಪಡೆಗೆ ವರಿಷ್ಠರ ಸಮ್ಮತಿ ಇದೆಯೇ??

ಬೆಂಗಳೂರು: ಕಲ್ಯಾಣ ರಾಜ್ಯ ‌ಪ್ರಗತಿ‌ ಪಕ್ಷದ ನಾಯಕ ಹಾಗೂ ಮಾಜಿ ಸಚಿವ ಗಾಲಿ ಜನಾರ್ಧನರಡ್ಡಿಗೆ ಬಿಜೆಪಿ ಸೇರ್ಪಡೆಯಾಗಲಿದ್ದಾರೆ!?
ಕಳೆದೆರಡು ದಿನಗಳಿಂದ ಈ ವಿಷಯ ರಾಜ್ಯದಲ್ಲಿ ಭಾರಿ‌ ಸದ್ದು ಮಾಡುತ್ತಿದೆ. ಜನಾರ್ಧನರಡ್ಡಿ ಅವರು ಬಿಜೆಪಿ ಸೇರ್ಪಡೆಯಾಗುತ್ತಾರೆ ಎಂಬ ಸಂಗತಿ‌ ರಾಜಕೀಯ ವಲಯದಲ್ಲಿ ಕೊಂಚ ಸಂಚಲನವನ್ನು ಮೂಡಿಸುತ್ತಿದೆ.


ಲೋಕಸಭೆ ಚುನಾವಣೆ ಸಮೀಪಿಸುತ್ತಿದ್ದು, ಶತಾಯಗತಾಯ ಗೆಲ್ಲಲೇಬೇಕು, ಅಡಳಿತರೂಢ ಕಾಂಗ್ರೆಸ್ ಪಕ್ಷಕ್ಕೆ ಏಟು ನೀಡಬೇಕು ಎಂದು ಬಿಜೆಪಿಗರು ಶತಪ್ರಯತ್ನ ನಡೆಸಿದ್ದಾರೆ. ಅದರ ಭಾಗವಾಗಿ ಗಾಲಿ ಜನಾರ್ಧನ ರಡ್ಡಿ ಅವರನ್ನು ಮರಳಿ ಪಕ್ಷಕ್ಕೆ ಕರೆತರುವ ಕಾರ್ಯ ತೆರೆಮರೆಯಲ್ಲಿ ನಡೆಯುತ್ತಿದೆ ಎನ್ನಲಾಗುತ್ತಿದೆ.
ಬಿ ವೈ ವಿಜಯೇಂದ್ರ ಅವರು ಬಿಜೆಪಿ ರಾಜ್ಯಾಧ್ಯಕ್ಷರಾಗಿ ಅಧಿಕಾರ ಸ್ವೀರಿಸಿದ ನಂತರ ಪಕ್ಷದಿಂದ ದೂರವಾಗಿರುವ ಮುಖಂಡರನ್ನು ಕರೆತರುವ ಕಾರ್ಯಕ್ಕೆ ಚಾಲನೆ ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಆದರೆ, ಜನಾರ್ಧನರಡ್ಡಿ ಬಿಜೆಪಿ ಸೇರ್ಪಡೆಗೆ ವರಿಷ್ಠರ ಸಮ್ನತಿ ಇದೆಯೋ ಇಲ್ಲವೋ ತಿಳಿದಿಲ್ಲ. ಏಕೆಂದರೆ ಕಳೆದ ವಿಧಾನಸಭೆ ಚುನಾವಣೆಯಲ್ಲಿ ಜನಾರ್ಧನರಡ್ಡಿ ಬಿಜೆಪಿ ಸೇರಲು ಇಚ್ಛಿಸಿದ್ದರು. ಆದರೆ, ಅಕ್ರಮ ಗಣಿಗಾರಿಕೆ ಸಂಬಂಧಿಸಿದ ಆರೋಪ ಹಾಗೂ ಜೈಲು ವಾಸ ಅನುಭವಿಸಿರುವ ರಡ್ಡಿ ಅವರನ್ನು ಪಕ್ಷಕ್ಕೆ ಸೇರ್ಪಡೆ ಮಾಡಿಕೊಂಡರೆ ಮತದಾರರಿಗೆ ತಪ್ಪು ಸಂದೇಶ ರವಾನೆಯಾಗಲಿದೆ. ಪ್ರತಿ ಪಕ್ಷಗಳಿಗೆ ಆಹಾರ ಸಿಕ್ಕಂತಾಗುತ್ತದೆ ಎನ್ನುವ ಕಾರಣಕ್ಕೆ ರಡ್ಡಿ ಅವರಿಗೆ ಬಿಜೆಪಿ ಬಾಗಿಲು ಬಂದ್ ಮಾಡಲಾಗಿತ್ತು.
ಕಳೆದ ವಿಧಾನಸಭೆ ಚುನಾವಣೆಯ ಸೋಲಿನ ನಂತರ ದಯನೀಯ ಸ್ಥಿತಿಯಲ್ಲಿರುವ ಬಿಜೆಪಿಗೆ ಲೋಕಸಭೆ ಚುನಾವಣೆಗೆ ಸಿದ್ದವಾಗಬೇಕಿದೆ. ಹೀಗಾಗಿ ಜನಾರ್ಧನರಡ್ಡಿ ಪಕ್ಷ ಸೇರ್ಪಡೆ ಮಾಡಿಕೊಂಡರೆ ಕಲ್ಯಾಣ ಕರ್ನಾಟಕದಲ್ಲಿ ಪಕ್ಣಕ್ಕೆ ಶಕ್ತಿ ತುಂಬಿದಂತಾಗುತ್ತದೆ ಎಂಬ ಅಭಿಪ್ರಾಯವಿದೆ. ಬಿಜೆಪಿ ವರಿಷ್ಠರು ಇದಕ್ಕೆ ಹಸಿರು ನಿಶಾನೆ ತೋರುತ್ತಾರೆಯೇ ಎಂಬುದು ಕುತೂಹಲಕರವಾಗಿದೆ.
ಕಳೆದ ವಿಧಾನಸಭೆ ಚುನಾವಣೆಯಲ್ಲಿ ಕಲ್ಯಾಣರಾಜ್ಯ ಪ್ರಗತಿ ಪಕ್ಷ ಸ್ಥಾಪಿಸಿದ್ದ ಜನಾರ್ಧನರಡ್ಡಿ ಅವರು ಗಂಗಾವತಿ ಕ್ಷೇತ್ರದಿಂದ ಸ್ಪರ್ಧಿಸಿ ಗೆಲುವು ಸಾಧಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

error: Content is protected !!