ಕೊಪ್ಪಳ: ‘ಲೋಕಸಭೆ ಚುನಾವಣೆ ಸಮಯದಲ್ಲಿ ಬಿಜೆಪಿ, ಜೆಡಿಎಸ್‌ನ 10ಕ್ಕೂ ಹೆಚ್ಚು ಶಾಸಕರು ಕಾಂಗ್ರೆಸ್ ಸೇರಲಿದ್ದಾರೆ ‘ ಎಂದು ಸಚಿವ ಆರ್.ಬಿ.ತಿಮ್ಮಾಪುರ ಹೇಳಿದ್ದಾರೆ.
ನಗರದಲ್ಲಿ ಲೋಕಸಭೆ ಚುನಾವಣೆ ನಿಮಿತ್ತ ಬುಧವಾರ ಹಮ್ಮಿಕೊಂಡಿದ್ದ ಕಾಂಗ್ರೆಸ್ ಸಭೆಯ ನಂತರ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.

ಬಿಜೆಪಿ ಹಾಗೂ ಜೆಡಿಎಸ್ ಮುಖಂಡರ ವರ್ತನೆಯಿಂದ ಶಾಸರು ಬೇಸತ್ತಿದ್ದಾರೆ. ಬಿಜೆಪಿಯವರಿಗೆ ಪ್ರತಿ ಪಕ್ಷದ ನಾಯಕನನ್ನೂ ಆಯ್ಕೆ ಮಾಡಲು ಸಾದ್ಯವಾಗಿಲ್ಲ. ದಳಪತಿಗಳ ಏಕಪಕ್ಷೀಯ ವರ್ತನೆಯಿಂದ ಅನೇಕ ಒದ್ದಾಡುತ್ತಿದ್ದಾರೆ. ಲೋಕಸಭೆ ಚುನಾವಣೆ ಸಮಯದಲ್ಲಿ ಅವರೆಲ್ಲರೂ ಕಾಂಗ್ರೆಸ್ ಸೇರ್ಪಡೆಗೊಳ್ಳಲಿದ್ದಾರೆ ಎಂದರು.
‘ರಾಜ್ಯದಲ್ಲಿ ಹುಚ್ಚು ದೊರೆ ಆಡಳಿತವಿದೆ’ ಎಂಬ ಕೆ.ಎಸ್.ಈಶ್ವರಪ್ಪ ಹೇಳಿಕೆ ಕುರಿತು ಮಾತನಾಡಿದ ಅವರು, ‘ಈಶ್ವರಪ್ಪ ಅವರ ವರ್ತನೆಯನ್ನು ಯಾರೂ ಒಪ್ಪಲ್ಲ ಎಂದರು.