ಲೋಕಸಭಾ ಚುನಾವಣೆ; ಏಪ್ರಿಲ್ 12 ರಿಂದ ನಾಮಪತ್ರ ಸಲ್ಲಿಕೆ ಆರಂಭ

admin Avatar

ಗದಗ : ಲೋಕಸಭಾ ಸಾರ್ವತ್ರಿಕ ಚುನಾವಣೆಯು ಈಗಾಗಲೇ ಘೋಷಣೆಯಾಗಿದ್ದು, ಮಾದರಿ ನೀತಿ ಸಂಹಿತೆ ಜಾರಿಯಲ್ಲಿದೆ. L ಹಾವೇರಿ ಲೋಕಸಭಾ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಏಪ್ರಿಲ್ 12 ರಂದು ಚುನಾವಣೆ ಅಧಿಸೂಚನೆ ಹೊರಡಿಸಲಾಗುತ್ತದೆ. ಅಂದಿನಿಂದಲೇ ನಾಮಪತ್ರ ಸಲ್ಲಿಸುವ ಪ್ರಕ್ರಿಯೆ ಆರಂಭವಾಗಲಿದೆ. ಸಂಬಂಧಪಟ್ಟ ಚುನಾವಣಾಧಿಕಾರಿಗಳಾದ 10-ಹಾವೇರಿ ಲೋಕಸಭಾ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿಗಳು, ಹಾವೇರಿ ಹಾಗೂ 3-ಬಾಗಲಕೋಟ ಲೋಕಸಭಾ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿಗಳು, ಬಾಗಲಕೋಟ ಅವರು ತಮ್ಮ ಕಾರ್ಯಾಲಯದಲ್ಲಿ ಸ್ವೀಕರಿಸುವರು.
ನಾಮಪತ್ರ ಸಲ್ಲಿಸಲು ಏಪ್ರಿಲ್ 19 ಕೊನೆಯ ದಿನವಾಗಿದೆ. ಏಪ್ರಿಲ್, 20 ರಂದು ನಾಮಪತ್ರ ಪರಿಶೀಲನೆ ಕಾರ್ಯ ನಡೆಯಲಿದ್ದು, ಏಪ್ರಿಲ್, 22 ರಂದು ನಾಮಪತ್ರ ಹಿಂಪಡೆಯಲು ಕೊನೆಯ ದಿನವಾಗಿದೆ. ಮೇ 7 ರಂದು ಮತದಾನ ನಡೆಯಲಿದ್ದು, ಜೂನ್ 4 ರಂದು ಮತ ಎಣಿಕೆ ಕಾರ್ಯ ನಡೆಯಲಿದೆ ಎಂದು ಜಿಲ್ಲಾಧಿಕಾರಿ ವೈಶಾಲಿ.ಎಂ.ಎಲ್ ಅವರು ತಿಳಿಸಿದ್ದಾರೆ.
ಜನವರಿ 22 ರಂದು ಪ್ರಕಟಗೊಂಡ ಅಂತಿಮ ಮತದಾರ ಪಟ್ಟಿಯ ನಂತರ ಈವರೆಗೆ ಲೋಕಸಭಾ ಚುನಾವಣೆಗೆ ಸಂಬಂಧಿಸಿದಂತೆ ಗದಗ ಜಿಲ್ಲೆಯಲ್ಲಿ 888816 ಮತದಾರರು ಇದ್ದು, ಇವರಲ್ಲಿ 443291 ಪುರುಷ ಮತದಾರರು ಮತ್ತು 445464 ಮಹಿಳಾ ಮತದಾರರು ಇದ್ದಾರೆ. 61 ಮಂದಿ ಇತರೆ ಮತದಾರರು ಇದ್ದಾರೆ ಎಂದು ಜಿಲ್ಲಾಧಿಕಾರಿ ಅವರು ತಿಳಿಸಿದ್ದಾರೆ.
ಶಿರಹಟ್ಟಿ ವಿಧಾನಸಭಾ ಕ್ಷೇತ್ರಕ್ಕೆ ಸಂಬಂಧಿಸಿದಂತೆ 229462 ಮತದಾರರು ಇದ್ದು, ಇವರಲ್ಲಿ 114919 ಪುರುಷ ಮತದಾರರು ಮತ್ತು 114530 ಮಹಿಳಾ ಮತದಾರರು ಇದ್ದು, ಇತರೆ 13 ಮಂದಿ ಮತದಾರರು ಇದ್ದಾರೆ.
ಹಾಗೆಯೇ ಗದಗ ವಿಧಾನಸಭಾ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಒಟ್ಟು 229081 ಮಂದಿ ಮತದಾರರು ಇದ್ದು, ಇವರಲ್ಲಿ 112988 ಪುರುಷ ಮತದಾರರು 116075 ಮಹಿಳಾ ಮತದಾರರು ಇದ್ದಾರೆ, 18 ಮಂದಿ ಇತರೆ ಮತದಾರರು ಇದ್ದಾರೆ.
ರೋಣ ವಿಧಾನಸಭಾ ಕ್ಷೇತ್ರದಲ್ಲಿ 238569 ಮತದಾರರು ಇದ್ದು, ಇವರಲ್ಲಿ 118782ಪುರುಷ ಮತದಾದರರು ಮತ್ತು 1,19,764 ಮಹಿಳಾ ಮತದಾರರು ,ಸೇರಿದಂತೆ 23 ಮಂದಿ ಇತರೆ ಮತದಾರರು ಇದ್ದಾರೆ. ಈ ವಿಧಾನಸಭಾ ಕ್ಷೇತ್ರಗಳು ಹಾವೇರಿ ಲೋಕಸಭಾ ಕ್ಷೇತ್ರ ವ್ಯಾಪ್ತಿಗೆ ಬರಲಿದೆ.
ಹಾಗೆಯೇ ಬಾಗಲಕೋಟೆ ಲೋಕಸಭಾ ಕ್ಷೇತ್ರಕ್ಕೆ ಒಳಪಡುವ ನರಗುಂದ ವಿಧಾನಸಭಾ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಒಟ್ಟು 191704 ಮತದಾರರು ಇದ್ದು ಇವರಲ್ಲಿ 96602 ಪುರುಷ ಮತದಾರರು ಮತ್ತು 95095 ಮಹಿಳಾ ಮತದಾರರು ಸೇರಿದಂತೆ 7 ಇತರೆ ಮತದಾರರು ಇದ್ದಾರೆ.
ಜಿಲ್ಲೆಯಲ್ಲಿ 1525 ಮಂದಿ ಸೇವಾ ಮತದಾರರು ಇದ್ದು, ಇವರಲ್ಲಿ 1,486 ಪುರುಷ ಮತದಾರರು ಹಾಗೂ 39 ಮಹಿಳಾ ಮತದಾರರು ಇದ್ದಾರೆ.
ಶಿರಹಟ್ಟಿ ವಿಧಾನಸಭಾ ಕ್ಷೇತ್ರದಲ್ಲಿ 179 ಮಂದಿ ಸೇವಾ ಮತದಾರರು ಇದ್ದು, ಇವರಲ್ಲಿ 173 ಪುರುಷ ಮತದಾರರು, 6 ಮಹಿಳಾ ಮತದಾರರು ಇದ್ದಾರೆ. ಹಾಗೆಯೇ ಗದಗ ವಿಭಾನಸಭಾ ಕ್ಷೇತ್ರದಲ್ಲಿ 222 ಮಂದಿ ಸೇವಾ ಮತದಾರರು ಇದ್ದು, ಇವರಲ್ಲಿ 217 ಪುರುಷ ಮತದಾರರು, 5 ಮಂದಿ ಮಹಿಳಾ ಸೇವಾ ಮತದಾರರು ಇದ್ದಾರೆ.
ರೋಣ ವಿಧಾನಸಭಾ ಕ್ಷೇತ್ರದಲ್ಲಿ 478 ಮಂದಿ ಸೇವಾ ಮತದಾರರು ಇದ್ದು, ಇವರಲ್ಲಿ 467 ಪುರುಷ ಮತದಾರರು ಹಾಗೂ 11 ಮಹಿಳಾ ಮತದಾರರು ಇದ್ದಾರೆ. ನರಗುಂದ ವಿಧಾನಸಭಾ ಕ್ಷೇತ್ರದಲ್ಲಿ 646 ಮಂದಿ ಸೇವಾ ಮತದಾರರು ಇದ್ದು, ಇವರಲ್ಲಿ 629 ಪುರುಷ ಮತದಾರರು 17 ಮಹಿಳಾ ಮತದಾರರು ಇದ್ದಾರೆ.
ಗದಗ ಜಿಲ್ಲಾ ವ್ಯಾಪ್ತಿಯಲ್ಲಿ 26,173 ಯುವ ಮತದಾರರು ಇದ್ದು, 13,698 ಪುರುಷ ಯುವ ಮತದಾರರು ಮತ್ತು 12,474 ಯುವ ಮಹಿಳಾ ಹಾಗೂ 01 ಇತರೆ ಮತದಾರರು ಇದ್ದಾರೆ. ಗದಗ ಜಿಲ್ಲೆಯಲ್ಲಿ 11983 ವಿಶೇಷ ಚೇತನ ಮತದಾರರು ಇದ್ದಾರೆ. ಹಾಗೇ 85 ವರ್ಷ ವಯೋಮಿತಿ ಮೀರಿದ ಹಿರಿಯ ನಾಗರೀಕರು 5749 ಜನ ಇದ್ದಾರೆ.
ಗದಗ ಜಿಲ್ಲೆಯಲ್ಲಿ ಒಟ್ಟು 961 ಮತಗಟ್ಟೆಗಳಿದ್ದು, ಈ ಪೈಕಿ ಶಿರಹಟ್ಟಿ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ 251, ಗದಗ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ 223, ರೋಣ ವಿಧಾನಸಭಾ ವ್ಯಾಪ್ತಿಯಲ್ಲಿ 267 ಹಾಗೂ ನರಗುಂದ ವಿಧಾನಸಭಾ ಮತಕ್ಷೇತ್ರದಲ್ಲಿ 220 ಮತಗಟ್ಟೆಗಳು ಬರುತ್ತವೆ.
ಮತದಾರರ ಪಟ್ಟಿಯಲ್ಲಿ ಹೆಸರು ನೋಂದಣಿ ಖಾತರಿಪಡಿಸಿಕೊಳ್ಳುವುದು, ಮತಗಟ್ಟೆ ಬಗ್ಗೆ ಮಾಹಿತಿ ಪಡೆಯುವುದು ಇತರೆ ಚುನಾವಣೆ ವಿಷಯಗಳಿಗೆ ಸಂಬಂಧಿಸಿದಂತೆ ದೂರು ಸಲ್ಲಿಸಲು/ ಮಾಹಿತಿಯನ್ನು ಪಡೆಯಲು ಜಿಲ್ಲಾಧಿಕಾರಿ ಅವರ ಕಚೇರಿಯಲ್ಲಿ ಟೋಲ್ ಫ್ರೀ ಸಂಖ್ಯೆ 1950 ಕ್ಕೆ ಕರೆ ಮಾಡಬಹುದಾಗಿದೆ. ಹಾಗೆಯೇ ವೋಟರ್ ಸಹಾಯವಾಣಿ 24*7 ಕಾರ್ಯನಿರ್ವಹಿಸಲಾಗುತ್ತದೆ.
ಜಿಲ್ಲೆಯಲ್ಲಿ ಯಾವುದೇ ರೀತಿ ದೂರುಗಳ ನಿರ್ವಹಣೆಗಾಗಿ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರಾದ ಸೈಯದ್ ಜೋಹೈಬುಲ್ಲಾ(ಮೊ.ನಂ: 8277944217) ಅವರನ್ನು ನೋಡಲ್ ಅಧಿಕಾರಿಗಳೆಂದು ನೇಮಕ ಮಾಡಲಾಗಿದೆ. ಇವರ ಅಧೀನದಲ್ಲಿ Complaint Monitoring Team, cVIGIL ತಂಡ, 1950 ಕಾಲ್ ಸೆಂಟರ್ ಹಾಗೂ ಜಿಲ್ಲಾ ಕಂಟ್ರೋಲ್ ರೂಂ ಕಾರ್ಯನಿರ್ವಹಿಸುತ್ತವೆ.
ಚುನಾವಣಾ ಆಯೋಗದ ಸೂಚನೆಯಂತೆ ಪ್ರತಿ ಮತಗಟ್ಟೆಗಳಿಗೆ ಒಬ್ಬರು ಅಧ್ಯಕ್ಷಾಧಿಕಾರಿ ಮತ್ತು ಮೂವರು ಮತಗಟ್ಟೆ ಅಧಿಕಾರಿಗಳು ಹಾಗೂ ಮೀಸಲು ಸಿಬ್ಬಂದಿಗಳನ್ನು ನೇಮಕ ಮಾಡಲಾಗುತ್ತದೆ. ಈ ಅಧಿಕಾರಿಗಳಿಗೆ ಈಗಾಗಲೇ ಮೊದಲನೇ ಹಂತದ ತರಬೇತಿಯನ್ನು ನೀಡಲಾಗಿರುತ್ತದೆ. ಅದೇ ರೀತಿ ಕೇಂದ್ರ ಸರ್ಕಾರಿ ಅಧಿಕಾರಿ/ ಸಿಬ್ಬಂದಿಗಳನ್ನು ಆಯ್ದ ಮತಗಟ್ಟೆಗಳಿಗೆ ಮೈಕ್ರೋ ವೀಕ್ಷಕರನ್ನಾಗಿ ನೇಮಕ ಮಾಡಲಾಗುತ್ತದೆ.
ಮಾದರಿ ನೀತಿ ಸಂಹಿತೆಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲು ಹಾಗೂ ಅಭ್ಯರ್ಥಿಗಳ ಚುನಾವಣಾ ವೆಚ್ಚದ ಮೇಲೆ ನಿಗಾ ಇಡಲು ಸೆಕ್ಟರ್ ಅಧಿಕಾರಿಗಳು ಪ್ರೈಯಿಂಗ್ ಸ್ಕ್ವಾಡ್, ಲೆಕ್ಕ ವೀಕ್ಷಕರ ತಂಡ, ವಿಡಿಯೋ ವಿವಿಂಗ್ ತಂಡ, ವಿಡಿಯೋ ಪರಿಶೀಲನಾ ತಂಡ, ಸಹಾಯಕ ವೆಚ್ಚ ವೀಕ್ಷಕರ ತಂಡಗಳನ್ನು ರಚಿಸಲಾಗಿದೆ.ಜಿಲ್ಲೆಯಲ್ಲಿ ಚುನಾವಣಾ ಪ್ರಕ್ರಿಯೆ ಪೂರ್ಣಗೊಳ್ಳುವವರೆಗೆ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ.
ಈವರೆಗೆ ಜಿಲ್ಲೆಯಲ್ಲಿ ರೂ. 20,47,700-00 ನಗದನ್ನು ವಶಪಡಿಸಿಕೊಳ್ಳಲಾಗಿದೆ. 3584.955 ಲೀಟರ್ ಮಧ್ಯವನ್ನು ವಶಪಡಿಸಿಕೊಳ್ಳಲಾಗಿದೆ, ಮಧ್ಯದ ಮೌಲ್ಯ ರೂ. 20,37,547.33 ಆಗುತ್ತದೆ. 0.506 ಕೆ.ಜಿ ಡ್ರಗ್ಸ್ ವಶಪಡಿಸಿಕೊಳ್ಳಲಾಗಿದೆ. ಡ್ರಗ್ಸನ ಮೌಲ್ಯ ರೂ. 21,404-00 ಆಗುತ್ತದೆ. 2 ಕೆ.ಜಿ ಬೆಳ್ಳಿಯನ್ನು ವಶಪಡಿಸಿಕೊಳ್ಳಲಾಗಿದೆ. ಬಂಗಾರದ ಮೌಲ್ಯ ರೂ. 1,60,000-00 ಆಗುತ್ತದೆ. ಇತರೆ ಸಾಮಗ್ರಿಗಳನ್ನು ಸಹ ವಶಪಡಿಸಿಕೊಳ್ಳಲಾಗಿದೆ, ಈ ಸಾಮಗ್ರಿಗಳ ಮೌಲ್ಯ ರೂ. 42,350-00 ಆಗುತ್ತದೆ. ಒಟ್ಟಾರೆಯಾಗಿ ಎಲ್ಲಾ Seizures ಒಟ್ಟು ಮೊತ್ತ ರೂ 43,09,001.33 ಆಗುತ್ತದೆ.
ಪತ್ರಿಕೆಗಳಲ್ಲಿ ಜಾಹೀರಾತು ಪ್ರಕಟಣೆಗೆ ಮತದಾನ ಹಾಗೂ ಮತದಾನದ 48 ಗಂಟೆಗಳ ಮೊದಲು ಮೇ. 5 ರ ಸಂಜೆ 6 ಗಂಟೆಯಿಂದ ಮತದಾನದ ದಿನ ಮೇ 7 ರಂದು ರಾಜಕೀಯ ಜಾಹೀರಾತು ಪ್ರಕಟಣೆಗೆ ಪೂರ್ವಾನುಮತಿ ಕಡ್ಡಾಯವಾಗಿದೆ. ಅಭ್ಯರ್ಥಿಗಳು ಅಥವಾ ರಾಜಕೀಯ ಪಕ್ಷಗಳು ಜಾಹೀರಾತು ಪ್ರಕಟಣೆಗೆ ಅನುಮತಿ ಪಡೆಯಲು ನಿಗದಿತ ನಮೂನೆಗಳಲ್ಲಿ ಎಂ.ಸಿ.ಎಂ.ಸಿ ಸಮಿತಿಗೆ ಅರ್ಜಿ ಸಲ್ಲಿಸಬೇಕು ಎಂದು ಜಿಲ್ಲಾಧಿಕಾರಿ ಹಾಗೂ ಎಂ.ಸಿ.ಎಂ.ಸಿ ಸಮಿತಿಯ ಅಧ್ಯಕ್ಷರಾದ ವೈಶಾಲಿ ಎಂ.ಎಲ್. ಅವರು ತಿಳಿಸಿದ್ದಾರೆ.

Leave a Reply

Your email address will not be published. Required fields are marked *