ಗದಗ ಜಿಲ್ಲೆ ಶಿರಹಟ್ಟಿ ತಾಲೂಕಿನ ಕಡಕೋಳ ಗ್ರಾಮದ ಗದಗ ಕ್ರೀಡಾಶಾಲೆಯ ವಿದ್ಯಾರ್ಥಿನಿ ಪವಿತ್ರಾ ಕುರ್ತಕೋಟಿ ಹಾವೇರಿ ಗದಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿಯವರನ್ನು ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದರು. ಬಸವರಾಜ ಬೊಮ್ಮಾಯಿಯವರು ಮುಖ್ಯಮಂತ್ರಿ ಯಾಗಿದ್ದಾಗ ತನಗೆ ಸೈಕ್ಲಿಂಗ್ ಮಾಡಲು ಕ್ರೀಡಾ ಇಲಾಖೆಯಿಂದ 8.50 ಲಕ್ಷದ ಸೈಕಲ್ ಕೊಡಿಸಿದ್ದರಿಂದ ತಾನು ರಾಷ್ಟ್ರೀಯ ಮಟ್ಟದಲ್ಲಿ ಪದಕ ಪಡೆದು ಏಷಿಯನ್ ಚಾಂಪಿಯನ್ ಶಿಪ್ ನಲ್ಲಿ ಪಾಲ್ಗೊಳ್ಳಲು ಅವಕಾಶ ದೊರೆತಿದ್ದರಿಂದ, ಇಂದು ಗದಗನಲ್ಲಿ ಬೊಮ್ಮಾಯಿಯವರನ್ನು ಭೇಟಿ ಮಾಡಿ ತನ್ನ ಸಾಧನೆಗೆ ಸಹಾಯ ಮಾಡಿದ್ದಕ್ಕಾಗಿ ಧನ್ಯವಾದ ಸಲ್ಲಿಸಿದರು. ಈ ಸಂದರ್ಭದಲ್ಲಿ ಪವಿತ್ರಾ ಅವರ ಕೋಚ್ ಆನಂದ ದೇಸಾಯಿ, ಮಾಜಿ ಸಚಿವ ಸಿ.ಸಿ. ಪಾಟೀಲ ಅವರು ಹಾಜರಿದ್ದರು.
Leave a Reply