ನಾಮಪತ್ರ ಸಲ್ಲಿಕೆಗೆ ಸಾವಿರಾರು ಜನ ಆಗಮಿಸುವ ನಿರೀಕ್ಷೆ: ಬಸವರಾಜ ಬೊಮ್ಮಾಯಿ

admin Avatar

ಗದಗ: ಏಪ್ರಿಲ್ 19 ರಂದು ಹಾವೇರಿ ಕ್ಷೇತ್ರದ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಕೆ ಮಾಡಲಿದ್ದು, ಅಂದು ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಎಲ್ಲ ವಿಧಾನಸಭಾ ಕ್ಷೇತ್ರಗಳಿಂದ ಸಾವಿರಾರು ಜನರು ಬರುವ ನಿರೀಕ್ಷೆ ಇದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಹಾವೇರಿ ಗದಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಗದಗನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು,
ನಾವು ಎಂಟು ಕ್ಷೇತ್ರದ ಜನರು ಕಾರ್ಯಕರ್ತರಿಗೆ ಬರಲು ಸೂಚನೆ ನೀಡಿದ್ದೇವೆ. ಸಾವಿರಾರು ಜನರು ಬರುತ್ತಾರೆ. ಅಂದು ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ, ಪ್ರತಿಪಕ್ಷದ ನಾಯಕರಾದ ಆರ್. ಅಶೋಕ್, ಮಾಜಿ ಸಚಿವರಾರ ಬೈರತಿ ಬಸವರಾಜ, ಮುರುಗೇಶ್ ನಿರಾಣಿ ಬರುತ್ತಾರೆ ಎಂದರು.
ಇದೇ ವೇಳೆ ಸಂಸದ ಕರಡಿ ಸಂಗಣ್ಣ ಬಿಜೆಪಿ ತೊರೆದಿರುವ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಸಂಗಣ್ಣ ಅವರು ಕಾಂಗ್ರೆಸ್ ಸೇರ್ಪಡೆ ಆಗುತ್ತಿರುವುದು ದುರದುಷ್ಟಕರ, ನಾವು ಅವರ ಮನವೊಲಿಸುವ ಕೆಲಸ ಮಾಡಿದ್ದೇವು ಕಾಂಗ್ರೆಸ್ ನವರು ಅವರಿಗೆ ಪ್ರಚೋದನೆ ಮಾಡಿದ್ದಾರೆ. ಚುನಾವಣೆ ಸಂದರ್ಭದಲ್ಲಿ ಟಿಕೆಟ್ ಸಿಗದವರು ಬೇಸರ ಮಾಡಿಕೊಳ್ಳುವುದು ಸಹಜ. ಇದು ರಾಷ್ಡ್ರೀಯ ಚುನಾವಣೆ ರಾಷ್ಟ್ರೀಯ ವಿಚಾರಗಳ ಮೇಲೆ ಆಗಿರುವುದರಿಂದ ಯಾವುದೇ ಸಮಸ್ಯೆ ಆಗುವುದಿಲ್ಲ ಎಂದು ಹೇಳಿದರು.
ಕಾಂಗ್ರೆಸ್ ನಿಂದಲೂ ಅನೇಕ ನಾಯಕರು ಬಿಜೆಪಿಗೆ ಸೇರ್ಪಡೆ ಆಗುತ್ತಿದ್ದಾರೆ. ಬೆಳ್ಳಟ್ಟಿ ಗ್ರಾಮದಲ್ಲಿ ನೂರಾರು ಜನರು ಬಿಜೆಪಿ ಸೇರ್ಪಡೆಯಾಗಿದ್ದಾರೆ. ಸ್ಥಳೀಯವಾಗಿ ಸಣ್ಣಪುಟ್ಟ ಭಿನ್ನಾಭಿಪ್ರಾಯ ಇದ್ದರೂ ಎಲ್ಲರನ್ನೂ ಒಟ್ಟಿಗೆ ಕರೆದುಕೊಂಡು ಹೋಗುವ ಕೆಲಸ ಮಾಡುತ್ತೇವೆ ಎಂದು ಹೇಳಿದರು.

Leave a Reply

Your email address will not be published. Required fields are marked *