ಹುಬ್ಬಳ್ಳಿ: ಹುಬ್ಬಳ್ಳಿಯ ಪ್ರತಿಷ್ಠಿತ ಬಿವಿಬಿ ಕಾಲೇಜಿನಲ್ಲಿ ಎಂಸಿಎ ಓದುತ್ತಿರುವ ವಿದ್ಯಾರ್ಥಿನಿಯನ್ನು ಮಾಸ್ಕ್ ಧಾರಿ ಯುವಕನೊಬ್ಬ ಚಾಕುವಿನಿಂದ ಇರಿದು ಕೊಲೆಗೈದು ಪರಾರಿಯಾಗಿದ್ದಾನೆ.
ನೇಹಾ ಹಿರೇಮಠ (23) ಕೊಲೆಯಾಗಿರುವ ವಿದ್ಯಾರ್ಥಿನಿ ಎಂದು ಪೊಲೀಸರು ತಿಳಿಸಿದ್ದಾರೆ. ನೇಹಾ ಹಿರೇಮಠ ಅವರು ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯ ಕಾಂಗ್ರೆಸ್ ಸದಸ್ಯ ನಿರಂಜನ ಹಿರೇಮಠ ಅವರ ಪುತ್ರಿಯಾಗಿದ್ದಾರೆ.
ನೇಹಾ ಹಿರೇಮಠ ಎಂಸಿಎ ಮೊದಲ ವರ್ಷದಲ್ಲಿ ವ್ಯಾಸಂಗ ಮಾಡುತ್ತಿದ್ದು, ಘಟನೆಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ. ಅನ್ಯಧರ್ಮೀಯ ಯುವಕ ಹತ್ಯೆ ಮಾಡಿದ್ದಾನೆ, ಇದೊಂದು ಲವ್ ಜಿಹಾದ್ ಎಂದು ಶಂಕಿಸಲಾಗಿದೆ.
ತೀವ್ರ ರಕ್ತಸ್ರಾವವಾಗಿ ನೇಹಾ ಮೃತಪಟ್ಟಿದ್ದಾರೆ ಎಂದು ಕಿಮ್ಸ್ ವೈದ್ಯರು ತಿಳಿಸಿದ್ದಾರಂತೆ. ಘಟನೆ ತಿಳಿದ ಮೇಲೆ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು. ವಿದ್ಯಾನಗರ ಠಾಣೆ ಪೊಲೀಸರು ಪ್ರಕರಣ ದಾಖಲಾಗಿದೆ.
Leave a Reply