ಮೇ 4ಕ್ಕೆ ಗದುಗಿಗೆ ಪ್ರಿಯಾಂಕಾ ಗಾಂಧಿ ಆಗಮನ: ಸಮಾವೇಶದ ಸ್ಥಳ ಪರಿಶೀಲಿಸಿದ ಎಚ್ ಕೆ ಪಾಟೀಲ

admin Avatar

ಗದಗ: ಹಾವೇರಿ-ಗದಗ ಲೋಕಸಭಾ ಮತಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಆನಂದಸ್ವಾಮಿ ಗಡ್ಡದ್ದೇವರಮಠ ಅವರ ಪರ ಪ್ರಚಾರ ಮಾಡಿ, ಮತಯಾಚನೆ ಮಾಡಲು ಕಾಂಗ್ರೆಸ್ ಪಕ್ಷದ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಅವರು ಮೇ  4ರಂದು ನಗರಕ್ಕೆ ಆಗಮಿಸಲಿದ್ದಾರೆ.
ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷದ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಅವರು ಪಾಲ್ಗೊಳ್ಳುವ ಪ್ರಚಾರ ಸಭೆ ನಗರದ ಮುನ್ಸಿಪಲ್ ಹೈಸ್ಕೂಲ್ ಆವರಣದಲ್ಲಿ ನಡೆಯಲಿದ್ದು, ಈ ಹಿನ್ನೆಲೆಯಲ್ಲಿ ಕಾನೂನು, ಪ್ರವಾಸೋದ್ಯಮ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ. ಪಾಟೀಲ, ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ಸಮಾವೇಶ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದರು.
ಸಮಾವೇಶದ ವೇದಿಕೆ, 15 ಸಾವಿರಕ್ಕೂ ಅಧಿಕ ಆಸನಗಳ ಅಳವಡಿಕೆ, ಭದ್ರತೆ, ವಿಶೇಷ ಆಸನಗಳ ವ್ಯವಸ್ಥೆ ಕುರಿತು ಚರ್ಚಿಸಿದರು. ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ, ರೋಣ ಶಾಸಕ ಜಿ.ಎಸ್. ಪಾಟೀಲ, ಗದಗ ಶಹರ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿ.ಬಿ ಅಸೂಟಿ, ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಅಕ್ಬರಸಾಬ್ ಬಬರ್ಚಿ, ಮಾಜಿ ಅಧ್ಯಕ್ಷ ಪ್ರಭು ಬುರಬುರೆ, ಜಿಪಂ ಮಾಜಿ ಅಧ್ಯಕ್ಷ ಸಿದ್ದು ಪಾಟೀಲ, ಜಿಲ್ಲಾ ಯುವ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಅಶೋಕ ಮಂದಾಲಿ, ಪ್ರಧಾನ ಕಾರ್ಯದರ್ಶಿ ಕೃಷ್ಣಗೌಡ ಪಾಟೀಲ ಸೇರಿ ಹಲವರು ಇದ್ದರು.

Leave a Reply

Your email address will not be published. Required fields are marked *